ಮನೆ ನಿರ್ಮಾಣಕ್ಕೆ ಸಚಿವರಿಗೆ ಮನವಿ

pdb (2)
Published on

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಚಿಟ್ಟಿಬೆಟ್ಟು ಎಂಟು ಕೊರಗ ಸಮುದಾಯದವರಿಗೆ ಹೊಸ ಮನೆ ನಿರ್ಮಾಣ ಕಾರ್ಯಕ್ಕೆ ಸಹಾಯಧನಕ್ಕೆ ಶಿಫಾರಸ್ಸು ಮಾಡುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೋಟತಟ್ಟು ಗ್ರಾಪಂ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯಿಂದ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net