ಶುಲ್ಕ ಕೈಬಿಡುವಂತೆ ಸಚಿವರಿಗೆ ಮನವಿ

New Project (17)
Published on

ಬಂಟ್ವಾಳ: ರೈತರ ನೀರಾವರಿ ಪಂಪ್‌ಸೆಟ್ ವಿದ್ಯುತ್ ಸಂಪರ್ಕ ಅಭಿವೃದ್ಧಿ ಶುಲ್ಕ ಕೈಬಿಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ರಾಜ್ಯ ಇಂಧನ ಸಚಿವರಿಗೆ ಮನವಿ ಮಾಡಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ಕೃಷಿ ಸಂಬಂಧಿತ ಬೆಳೆಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯಡಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಅರ್ಜಿ ಸಲ್ಲಿಸುವಾಗಲೇ ಠೇವಣಿಯೊಂದಿಗೆ ಅಭಿವೃದ್ಧಿ ಶುಲ್ಕ ಹೆಸರಿನಲ್ಲಿ 15 ಸಾವಿರ ರೂ. ಹೆಚ್ಚುವರಿಯಾಗಿ ಪಾವತಿಸಲು ಸರ್ಕಾರದ ಇಂಧನ ಇಲಾಖಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇದರಿಂದ ರಾಜ್ಯದ ಕೃಷಿಕ ಕುಟುಂಬಗಳು ಮತ್ತು ರೈತರಿಗೆ ಹೊರೆಯಾಗಿದ್ದು, ರೈತರು ಸರ್ಕಾರದ ನಿಲುವಿನ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಲಕ್ಷಾಂತರ ರೈತರು ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿ ಕೆಲಸಕ್ಕೆ ಆದೇಶವಾಗಿರುವಾಗ ವಿದ್ಯುತ್ ಸಂಪರ್ಕ ಪಡೆಯುವ ಸಂದರ್ಭ ಇಂತಹ ಆದೇಶಗಳು ರೈತರಲ್ಲಿ ದಿಗ್ಭ್ರಮೆ ಹುಟ್ಟಿಸಿವೆ ಎಂದು ಅವರು ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net