ಹೆದ್ದಾರಿ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರಿಗೆ ಮನವಿ

Published on

ಕಾಸರಗೋಡು: ಜಿಲ್ಲೆಯ ಉಪ್ಪಳ, ಮಂಗಲ್ಪಾಡಿ ಹಾಗೂ ಕುಣಿಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ಕೆಲವೊಂದು ಸಮಸ್ಯೆಗಳನ್ನು ಪರಿಹರಿಸುವಂತೆ ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಇತ್ತೀಚೆಗೆ ಮನವಿ ನೀಡಿದರು.

ಮಂಗಲ್ಪಾಡಿ ಗ್ರಾಮ ಪಂಚಾಯಿತಿ ಕಚೇರಿ ಸನಿಹ ಹಾಗೂ ಕುಣಿಯ ಸರ್ಕಾರಿ ವೊಕೇಷನಲ್ ಹೈಯರ್ ಸೆಕೆಂಡರಿ ಶಾಲೆಯ ಆಸುಪಾಸು ಅಂಡರ್‌ಪಾಸ್ ಅಥವಾ ಫುಟ್ ಓವರ್ ಬ್ರಿಡ್ಜ್ ನಿರ್ಮಿಸಲು ತಕ್ಷಣ ಮಧ್ಯಪ್ರವೇಶಿಸುವಂತೆ ಎಂ.ಎಲ್.ಅಶ್ವಿನಿ ಒತ್ತಾಯ ಮಾಡಿದರು. ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮಿತಿ ಸಲ್ಲಿಸಿದ ಮನವಿ ಹಾಗೂ ಕುಣಿಯ ಜಿವಿಎಚ್‌ಎಸ್ ಅಧಿಕಾರಿಗಳು, ಕುಣಿಯದಲ್ಲಿರುವ ಕೆಲವು ಸಂಸ್ಥೆಗಳು ಇಲ್ಲಿನ ವಿದ್ಯಾರ್ಥಿಗಳು ಹಾಗೂ ಇತರ ನೌಕರರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಮೇಲ್ಸೇತುವೆ ನಿರ್ಮಿಸುವ ಬೇಡಿಕೆಯನ್ನೊಳಗೊಂಡ ಮನವಿಯನ್ನು ಅಶ್ವಿನಿ, ಕೇಂದ್ರ ಸಚಿವರಿಗೆ ಹಸ್ತಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net