ಲಕ್ಷ್ಮೇಶ್ವರ ಪುರಸಭೆ ಮೇಲ್ದರ್ಜೆಗೇರಿಸಲು ಮನವಿ

VV DIGITAL
Published on

ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸುವಂತೆ ಎಂದು ಕೆಪಿಸಿಸಿ ಸದಸ್ಯ, ಕಾಂಗ್ರೆಸ್ ಯುವ ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಆಗ್ರಹಿಸಿದ್ದಾರೆ.

ಈ ಕುರಿತು ಪೌರಾಡಳಿತ ಸಚಿವ ರಹೀಂ ಖಾನ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ಪಟ್ಟಣದ ಪುರಸಭೆಯು ರಚನೆಯಾದ ವೇಳೆಯಲ್ಲಿದ್ದ ವ್ಯವಸ್ಥೆ ಮತ್ತು ಜನಸಂಖ್ಯೆ ಈಗ ಇಲ್ಲ, ಅಭಿವೃದ್ಧಿ ಕಂಡಿರುವ ಪಟ್ಟಣದ ಸ್ಥಿತಿಗಳ ಅವಲೋಕನ ಮಾಡಬೇಕಿದೆ. ಐತಿಹಾಸಿಕ ಮತ್ತು ಭೌಗೋಳಿಕವಾಗಿ ವಿಶಿಷ್ಟ ಹಿನ್ನೆಲೆಯ ಪಟ್ಟಣ ಗಣನೀಯ ಪ್ರಮಾಣದಲ್ಲಿ ಬೆಳೆಯುತ್ತಿದೆ. ಜಿಲ್ಲೆಯ ಎರಡನೇ ದೊಡ್ಡ ಪಟ್ಟಣವಾಗಿದ್ದು, ಜನಸಾಂದ್ರತೆಯೂ ಹೆಚ್ಚಿದೆ ಎಂದು ಸಚಿವರಿಗೆ ತಿಳಿಸಿದರು.

ಅಷ್ಟೇ ಅಲ್ಲದೇ ಸುತ್ತಲಿನ ಪ್ರದೇಶಗಳ ವ್ಯಾಪಾರ ವಹಿವಾಟುಗಳಿಗೆ ಕೇಂದ್ರ ಸ್ಥಾನವೂ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಎಲ್ಲ ಅವಕಾಶಗಳಿವೆ. ಪಟ್ಟಣವು ಎಲ್ಲ ವಿಷಯಗಳಲ್ಲಿ ಬೆಳವಣಿಗೆ ಕಾಣುತ್ತಿದೆ. ಪುರಸಭೆಯಿಂದ ನಗರಸಭೆಯಾಗಿ ಮಾರ್ಪಟ್ಟರೆ ಸರ್ಕಾರದ ಅನುದಾನ, ಸೌಲಭ್ಯಗಳು ದೊರಕಿ ಇನ್ನೂ ಹೆಚ್ಚಿನ ಅನೂಕೂಲಗಳನ್ನು ಜನರಿಗೆ ತಲುಪಿಸಬಹುದಾಗಿದೆ. ಸರ್ಕಾರದ ಮಟ್ಟದಲ್ಲಿ ಈ ಕುರಿತು ಚರ್ಚೆ ನಡೆಸಿ ನಗರಸಭೆಯನ್ನಾಗಿ ಮಾಡಲು ಕ್ರಮ ವಹಿಸುವಂತೆ ಸಚಿವರನ್ನು ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net