ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ

Mahesh Tenginakayi
Published on

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರರಿಗೆ ಈ ಹಿಂದೆ ಶೇ. 10ರಷ್ಟು ನೀಡಿದ್ದ ಮೀಸಲಾತಿಯನ್ನು ಈಗ ಶೇ. 15ಕ್ಕೆ ಏರಿಸಿದೆ. ಈ ಸರ್ಕಾರವು ಕೇವಲ ಅಲ್ಪಸಂಖ್ಯಾತರ ತುಷ್ಟಿಕರಣ ಮತ್ತು ಓಲೈಕೆಯಲ್ಲಿ ತೊಡಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದು ಸಮಾಜದಲ್ಲಿ ಎಲ್ಲರೂ ಬಹಳ ಸ್ಥಿತಿವಂತರಿಲ್ಲ. ಈಗಲೂ ಒಂದು ತುತ್ತಿಗಾಗಿ ಪರದಾಡುವವರು ಸಾಕಷ್ಟು ಜನ ಇದ್ದಾರೆ. ರಾಜ್ಯದ ಈ ಭಂಡ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಮತಗಳಿಂದ ಅಧಿಕಾರಕ್ಕೆ ಬಂದಿರುವಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದಲೂ ಪ್ರತಿಯೊಂದು ವಿಷಯದಲ್ಲೂ ಅಲ್ಪಸಂಖ್ಯಾತರ ಜಪ ಮಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲ ವಿಭಾಗಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಎಂದು ಕಾಂಗ್ರೆಸ್ ಸರ್ಕಾರ ಹಪ ಹಪಿಸುತ್ತಿದೆ. ಉಳಿದ ಜನಾಂಗಗಳು ಈ ಸರ್ಕಾರದ ಲೆಕ್ಕದಲ್ಲಿ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net