ನಗರೋತ್ಥಾನ ಯೋಜನೆಯಡಿ ಅರ್ಜಿ ಆಹ್ವಾನ

application
Published on

ಬಂಟ್ವಾಳ: ಪುರಸಭಾ ವ್ಯಾಪ್ತಿಯ 2023-24ನೇ ಸಾಲಿಗೆ ಅಮೃತ ನಗರೋತ್ಥಾನ ಯೋಜನೆಯಡಿ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಮೃತ ನಗರೋತ್ಥಾನ ಯೋಜನೆಯಡಿ ಪ.ಜಾತಿಯ ಕುಟುಂಬದ ಫಲಾನುಭವಿಗಳಿಗೆ ಮನೆ ರಿಪೇರಿಗೆ ಸಹಾಯಧನ, ಸ್ವ ಉದ್ಯೋಗಕ್ಕೆ ಸಹಾಯಧನ, ಪರಿಶಿಷ್ಟ ಜಾತಿಯ ಎಂಬಿಬಿಎಸ್ ಅಥವಾ ಬಿಇ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಪ.ಜಾತಿಯ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹಧನ, ನಲ್ಲಿನೀರು ಸಂಪರ್ಕಕ್ಕೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಮೃತ ನಗರೋತ್ಥಾನ ಯೋಜನೆಯಡಿ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಇತರ ಜಾತಿಯ ಬಿಪಿಎಲ್ ಕುಟುಂಬದವರ ಶಸ್ತ್ರಚಿಕಿತ್ಸೆಗೆ ಖರ್ಚಾದ ವೆಚ್ಚ ಮರುಪಾವತಿ, ವಿದ್ಯಾರ್ಥಿವೇತನಕ್ಕಾಗಿ 10ನೇ ತರಗತಿಗಿಂತ ಮೇಲ್ಪಟ್ಟ ತರಗತಿಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಮೃತ ನಗರೋತ್ಥಾನ ಯೋಜನೆಯಡಿ ಅಂಗವಿಕಲರಿಗೆ ಹೊಸ ಮನೆ ನಿರ್ಮಾಣಕ್ಕೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೇ ದಿನಾಂಕ ಅ.17, ಹೆಚ್ಚಿನ ಮಾಹಿತಿಗಾಗಿ ಪುರಸಭಾ ಕಚೇರಿ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net