

ಬೆಂಗಳೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ಬ್ಯಾಂಕುಗಳ ಸಹಯೋಗದಲ್ಲಿ 2024-25ನೇ ಸಾಲಿನ ಸ್ವಯಂಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವ್ಯಾಸಂಗ, ಗಂಗಾ ಕಲ್ಯಾಣ ನೀರಾವರಿ ಯೋಜನೆ ಮತ್ತು ಸ್ವಾವಲಂಬಿ ಯೋಜನೆಗಳಡಿ ಸಾಲಸೌಲಭ್ಯ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ನಲ್ಲಿ ಆನ್‌ಲೈನ್ ಮೂಲಕ ಸೆ. 16ರೊಳಗೆ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ. 123/1037, 1ನೇ ಮಹಡಿ, 20ನೇ ಮುಖ್ಯರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು- 10. ದೂ: 080- 2225 2555, 2315 6006. ವೆಬ್ಸೈಟ್: http://upparadevelopment.karnataka.gov.in
ಸಂಪರ್ಕಿಸಬಹುದು.