ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Loan
Published on

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನಲ್ಲಿ ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ, ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಮತೀಯ ಅಲ್ಪಸಂಖ್ಯಾತರಾಗಿದ್ದು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.6,00,000 ರೂ. ಮೀರಬಾರದು, ವಯೋಮಿತಿ: 18 ರಿಂದ 55 ವರ್ಷ ಇರಬೇಕು. ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರಿಯಲ್ಲಿರಬಾರದು ಹಾಗೂ ಅರಿವು ಮತ್ತು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ ಹೊರತು ಪಡಿಸಿ ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ ಅಥವಾ ಸಹಾಯಧನ ಪಡೆದಿರಬಾರದು.

ಅರ್ಜಿಗಳನ್ನು ವೆಬ್ ಸೈಟ್: https://kmdconline.karnataka.gov.in  ನಲ್ಲಿ ಆಗಸ್ಟ್ 31 ರೊಳಗೆ ಸಲ್ಲಿಸಬೇಕು. ವಿವರಗಳಿಗೆ: 080-23539786 ರಲ್ಲಿ ಸಂಪರ್ಕಿಸಬಹುದು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net