

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆ ಚಾಮರಾಜಪೇಟೆ ಹಾಗೂ ಅತ್ತಿಬೆಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಆನೇಕಲ್ ತಾಲೂಕಿನ ತೆಲಗರಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಪಡೆಯಲು ಸಾಮಾಜಿಕ ಹಾಗೂ ಅರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗಗಳಿಗೆ ಸೇರಿದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್: cetonline.karnataka.gov.in/kreis24d ನಲ್ಲಿ ಸಂಪರ್ಕಿಸಿ, ಜು. 25ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗೆ: ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜಿಲ್ಲೇಟಾ ಟವರ್, ಮಿಷನ್ ರಸ್ತೆ ಸಂಪಂಗಿರಾಮನಗರ, ಬೆಂಗಳೂರು-560 027. ದೂ: 080-22240449 ಗೆ ಸಂಪರ್ಕಿಸಬಹುದಾಗಿದೆ.