ಬಾಲಕಿಯರ ವಸತಿ ನಿಲಯಕ್ಕೆ ಅರ್ಜಿ

Published on

ಕೂಡ್ಲಿಗಿ: ಪಟ್ಟಣದ ಕೋರಕಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ನಡೆಯುತ್ತಿರುವ ಸ್ಪಂದನ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಪ್ರಸಕ್ತ ಸಾಲಿಗೆ ಉಚಿತ ಪ್ರವೇಶವಿದ್ದು, ಆಸಕ್ತ ಕಾಲೇಜು ವಿದ್ಯಾರ್ಥಿನಿಯರು ನ.16 ರೊಳಗೆ ಅರ್ಜಿ ಸಲ್ಲಿಸಬಹುದು.

ಪಿಯುಸಿ, ಡಿಪ್ಲೊಮಾ, ಐಟಿಐ, ಬಿ.ಇಡಿ, ಪ್ಯಾರಮೆಡಿಕಲ್ ಮತ್ತು ನಸಿರ್ಂಗ್ ಸೇರಿದಂತೆ ಇತರೆ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಮಾಹಿತಿಗೆ 9448343347, 8310922634 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸ್ಪಂದನ ಸಂಸ್ಥೆಯ ಖಜಾಂಚಿ ಟಿ.ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net