ಅಪ್ರೆಂಟಿಶಿಪ್​ ತರಬೇತಿಗಾಗಿ ಅರ್ಜಿ

Deposit licensed weapons
Deposit licensed weapons
Published on

ವಿಜಯಪುರ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್​ ಜ್ಞಾನಹೊಂದಿದ ಪರಿಶಿಷ್ಟ ಜಾತಿ&ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ 12 ತಿಂಗಳ ಅಪ್ರೆಂಟಿಶಿಪ್​ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ವಿಶೇಷ ಟಕ ಹಾಗೂ ಗಿರಿಜನ ಉಪಯೋಜನೆಯಡಿ ತರಬೇತಿಗೆ ಆಹ್ವಾನಿಸಲಾಗಿದೆ. ನಗರದ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಪ್ರೆಂಟಿಶಿಪ್​ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್​ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ನ. 30 ರೊಳಗೆ ಸ್ಟೇಶನ್​ ರಸ್ತೆಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ಲ ಹನುಮಂತರಾಯ ರಂಗಮಂದಿರ ಆವರಣದಲ್ಲಿನ ಕಚೇರಿಗೆ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net