ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಕೊಪ್ಪಳ: ಕೃಷಿ ಇಲಾಖೆಯಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೃಷಿ ಪಂಡಿತ ಪ್ರಶಸ್ತಿ ಸ್ಪರ್ಧೆಗೆ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕ ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಇಲಾಖೆಯ K-Kisan Portal Citizan Login ನಲ್ಲಿ ಸ್ವತಃ ರೈತರೇ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಎಫ್.ಐ.ಡಿ ಯನ್ನು ಬಳಸಿಕೊಂಡು ಕೃಷಿ ಪ್ರಶಸ್ತಿ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ನೀರಾವರಿ ಮತ್ತು ಮಳೆಯಾಶ್ರಿತ ಭತ್ತ ಮುಂಗಾರು ಹಾಗೂ ಮಳೆಯಾಶ್ರಿತ ಮುಂಗಾರು ಬೆಳೆಗಳಾದ ಶೇಂಗಾ, ನವಣೆ, ಸಜ್ಜೆ, ಪೂರ್ಣ ಬೆಳೆಯ ತೊಗರಿ ಹಾಗೂ ಮುಸುಕಿನ ಜೋಳ, ಈ ಎಲ್ಲಾ ಬೆಳೆಗಳನ್ನು ಮುಂಗಾರು ಹಂಗಾಮಿನಲ್ಲಿ ಆಯ್ಕೆ ಮಾಡಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ ರೈತರು ಕೃಷಿ ಪಂಡಿತ ಪ್ರಶಸ್ತಿಯ ಮುಂಗಾರು ಹಂಗಾಮಿ ಸ್ಪರ್ಧೆಗೆ ಆಗಸ್ಟ್ 31ರ ಹಾಗೂ ಹಿಂಗಾರು ಹಂಗಾಮಿನ ಸ್ಪರ್ಧೆಗೆ ನವೆಂಬರ್ 30 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್‌ಲೈನ್ K-Kisan Portal ನಲ್ಲಿ ಅರ್ಜಿ ಸಲ್ಲಿಸಲು ಸಂಬAಧಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net