ಸ್ನಾತಕೋತ್ತರ ಪದವಿಗೆ ಅರ್ಜಿ

Published on

ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ಶಾಲಾ, ಕಾಲೇಜಿನಿಂದ ಹೊರಗುಳಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿಯ ಉನ್ನತ ಶಿಕ್ಷಣವನ್ನು ಹಾಗೂ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣವನ್ನು ನೀಡುವ ಯೋಜನೆ ಹೊಂದಿದ್ದು ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಆ. 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪ್ರವೇಶಾತಿಗಾಗಿಯೇ ಬೆಂಗಳೂರಿನ ಹಜ್ ಭವನದಲ್ಲಿ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನೀಡುವ ಆಫೈನ್, ದೂರ ಶಿಕ್ಷಣ ಕ್ರಮದ ಪದವಿ ಕೋರ್ಸ್‌ಗಳು ಒಳಗೊಂಡಂತೆ ಒಟ್ಟು 69 ಕೋರ್ಸ್ ಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಹಜ್ ಭವನದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net