

ವಿಜಯವಾಣಿ ಸುದ್ದಿಜಾಲ ಧಾರವಾಡ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ, ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿ ನೀಡಲಾಗುವುದು. 1ನೇ ತರಗತಿಯಿಂದ ಪದವಿ ಅಥವಾ ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲಾಗುವುದು. ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಧಾರವಾಡ ಕಚೇರಿಯಿಂದ ಅರ್ಜಿ ಪಡೆದು ಅ. 30ರೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.