ಅರ್ಜಿ ಆಹ್ವಾನ

Vijayavani-Featured-Image
Published on

ಧಾರವಾಡ: ಪ್ರಸಕ್ತ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್​ (ಎನ್​ಎಚ್​ಎಂ), ಕೃಷಿ ಯಾಂತ್ರೀಕರಣ ಉಪ ಅಭಿಯಾನ (ಎಸ್​ಎಂಎಎಂ) ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ (ಪಿಎಂಕೆಎಸ್​ವೈ) ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ (ಆರ್​ಕೆವಿವೈ) ಯೋಜನೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ (ಸಿಎಚ್​ಡಿ) ಯೋಜನೆಯಡಿ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ನವಲಗುಂದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಜು. 4ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net