ಅರ್ಜಿ ಆಹ್ವಾನ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ಪ್ರದಾನ ಮಾಡಲು ಉದ್ದೇಶಿಸಿದ್ದು, ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಸೇರಿ ಒಟ್ಟು 7 ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗೆ ಆಹ್ವಾನಿಸಲಾಗಿದೆ.
ಪ್ರತಿ ಕೃತಿಯ 4 ಪ್ರತಿಗಳನ್ನು ಹಾಗೂ ಸೂಕ್ತ ದಾಖಲೆಗಳೊಂದಿಗೆ ಆ. 26ರೊಳಗೆ ಅರ್ಜಿ ಸಲ್ಲಿಸಬಹುದು. 2023ರ ಜನವರಿಯಿಂದ ಡಿಸೆಂಬರ್​ವರೆಗಿನ ಅವಧಿಯಲ್ಲಿ ಪ್ರಕಟಗೊಂಡ ಕೃತಿಗಳಾಗಿರಬೇಕು. ಈ ಪ್ರಶಸ್ತಿಗೆ 18 ವರ್ಷದೊಳಗಿನ ಮಕ್ಕಳು, ಮಕ್ಕಳಿಗಾಗಿ ಆಯಾ ವರ್ಷದ ಅವಧಿಯಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸಿದ ಕತೆ, ಕಾವ್ಯ ಕೃತಿಗಳಿದ್ದಲ್ಲಿ ಅಂತಹ ಕೃತಿಗಳನ್ನೂ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗೆ ಕಚೇರಿ ವೆಬ್​ಸೈಟ್​ ((https://balavikasaacademy.karnatata.gov.in)))ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net