ಅರ್ಜಿ ಆಹ್ವಾನ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆ ಅಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥಿನ್​ ಹೊದಿಕೆ, ಡೀಸೆಲ್​, ಪೆಟ್ರೋಲ್​ ಪಂಪ್​ಸೆಟ್​ (ಗರಿಷ್ಠ 10 ಎಚ್​ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಸೆ. 25ರೊಳಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net