

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ತಾಲೂಕು ಘಟಕ ವತಿಯಿಂದ ಅ. 6ರಂದು ಇಲ್ಲಿನ ಲಿಂಗಾಯತ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಿದ್ದು, ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವೀತಿಯ ಪಿಯುಸಿ, ಡಿಪ್ಲೋಮಾ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾಥಿರ್ಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಅಧಿಕೃತ ಅಂಕಪಟ್ಟಿ, ಆಧಾರ್ ಕಾರ್ಡ್, ಮೋಬೈಲ್ ಸಂಖ್ಯೆ, ಭಾವಚಿತ್ರ (2), ವಿಳಾಸ ಸಹಿತ ಅಜಿರ್ಯನ್ನು ಸೆ. 25ರೊಳಗೆ ಅರುಣಕುಮಾರ ಶೀಲವಂತ, ಅಧ್ಯಕ್ಷರು ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ , "ಅನ್ನಪೂರ್ಣ', ಮನೆ ನಂ. 1, ಸಾಯಿ ರೆಸಿಡೆನ್ಸಿ, ಜಯನಗರ ಧಾರವಾಡ ವಿಳಾಸಕ್ಕೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.