

ಧಾರವಾಡ: ರಾಜ್ಯ ಸರ್ಕಾರದ ಆತ್ಮ ಯೋಜನೆಯಡಿ ಕೃಷಿ ವಲಯದಲ್ಲಿ ವಿವಿಧ ಚಟುವಟಿಕೆಗಳಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ, ವಿಶಿಷ್ಟ ಸಾಧನೆ ಮೂಲಕ ರೈತ ಸಮುದಾಯಕ್ಕೆ ಕೊಡುಗೆ ನೀಡುತ್ತಿರುವ ಜಿಲ್ಲೆಯ ರೈತರಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಕೃಷಿ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ ಮತ್ತು ಹಸಿರುಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ, ಇತರ ವಿಶಿಷ್ಟ ಸಾಧನೆ ಮಾಡಿರಬೇಕು.
ಆಸಕ್ತ ರೈತರು ಜಂಟಿ ಕೃಷಿ ನಿರ್ದೇಶಕರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ನ. 8ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.