

ಧಾರವಾಡ: ಪ್ರಸಕ್ತ ಸಾಲಿನ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ಡಿ ಅಧ್ಯಯನ ಆರಂಭಿಸಿರುವ (2024ರ ಜ.10 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್ಡಿ ಆರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, ಮತ್ತು 3ಬಿ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧಿನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜ. 20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.