

ಧಾರವಾಡ: ಕನಾರ್ಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 3 ವರ್ಷಗಳ ಅವಧಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡದಲ್ಲಿ ಪ್ಯಾನಲ್ ವಕೀಲರನ್ನು ನೇಮಿಸಲು ನಿರ್ದೇಶಿಸಿದೆ. ಹೀಗಾಗಿ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹೊಸದಾಗಿ ಪ್ಯಾನಲ್ ವಕೀಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ನ್ಯಾಯವಾದಿಗಳು ನಿಗದಿತ ಅರ್ಜಿ ನಮೂನೆಯನ್ನು ಮೇ 2ರೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ. ರಮಾ ತಿಳಿಸಿದ್ದಾರೆ.
-------------------