

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ರೇಷ್ಮೆ ಇಲಾಖೆಯಿಂದ ಸಹಾಯಧನ ಸೌಲಭ್ಯ ಪಡೆಯಲು ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಹಿಪ್ಪುನೇರಳೆ ತೋಟ ಸ್ಥಾಪನೆ, ಹಿಪ್ಪುನೇರಳೆ ನರ್ಸರಿ ಉತ್ಪಾದನೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ವೈಯಕ್ತಿಕ ಕಾಮಗಾರಿ ಅಡಿ, ರೇಷ್ಮೆ ಕೃಷಿ ಅಭಿವೃದ್ಧಿ ಚಟುವಟಿಕೆಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಧಾರವಾಡ ಜಿಲ್ಲಾ ಪಂಚಾಯತ ರೇಷ್ಮೆ ಉಪನಿರ್ದೇಶಕರ ಕಚೇರಿ, ಹುಬ್ಬಳ್ಳಿ ವಿಭಾಗದ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.