

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿನ 6 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2025- 26ನೇ ಸಾಲಿಗೆ ಆಂಗ್ಲ ಮಾಧ್ಯಮದ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25 ಸೀಟು ಲಭ್ಯ ಇವೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕು ಅಂಚಟಗೇರಿ ಗ್ರಾಮದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ. 2 ಹಾಗೂ ಧಾರವಾಡ ತಾಲೂಕಿನ ಶಿಂಗನಹಳ್ಳಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ನವಲಗುಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಮಾ. 10ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.