

ಮೈಸೂರು:2024/25ನೇ ಸಾಲಿಗೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಗಂಡು ಮಕ್ಕಳಿಗೆ 8ನೇ ತರಗತಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ರಾಮಕೃಷ್ಣ ವಿದ್ಯಾಶಾಲೆಗೆ ಪ್ರವೇಶ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಪಡೆಯಲು ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿರುವ ಸಹಾಯಕ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವುದು ಮತ್ತು ಅರ್ಜಿಯನ್ನು ಸ್ವೀಕರಿಸಿದ ತಾಲ್ಲೂಕಿನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾ. 26 ಆಗಿದ್ದು, ಪ್ರವೇಶ ಪರೀಕ್ಷೆಯು ಏ.11 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಯಾದವಗಿರಿಯ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ನಡೆಯುತ್ತದೆ.
ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, 7ನೇ ತರಗತಿಯ ಅಂಕಪಟ್ಟಿ, ಅಭ್ಯರ್ಥಿಯ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅಥವಾ ವಿಳಾಸ ದೃಢೀಕರಣ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಮೈಸೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.