ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ

application
Published on

ಮೈಸೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ 2024 ನೇ ಸಾಲಿನ ಬೀರಿಹುಂಡಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಇಲಾಖಾ ವೆಬ್ ಸೈಟ್ http://www.cite.karnataka.gov.in ರಲ್ಲಿ ನೇರವಾಗಿ ಅಥವಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ಸೈಬರ್ ಕೆಫೆಗಳ ಮೂಲಕ ಜೂ.3 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೀರಿಹುಂಡಿಯನ್ನು ನೇರವಾಗಿ ಅಥವಾ ದೂ.ಸಂ.9480190608 ಮತ್ತು 9535368929 ಅನ್ನು ಸಂಪರ್ಕಿಸಬಹುದು ಎಂದು ಬೀರಿಹುಂಡಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net