ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

application
Published on

ಮೈಸೂರು:ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 1 ಲಕ್ಷ ಹಾಗೂ ಪ್ರವರ್ಗ-2ಎ,2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 44,500 ಮಿತಿ ಇರುವ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd  ಮೂಲಕ ಆನ್‌ಲೈನ್‌ನಲ್ಲಿ ಜುಲೈ 10 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದಾಗಿದ್ದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net