ಮಳವಳ್ಳಿ: ತಾಲೂಕಿನ ವ್ಯಾಪ್ತಿಯಲ್ಲಿರುವ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಅರ್ಜಿ ಆಹ್ವಾನಿಸಿದೆ.
ತಾಲೂಕಿನ 2 ಅಂಗನವಾಡಿ ಕಾರ್ಯಕರ್ತೆಯರು, 12 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ 52 ಸಹಾಯಕಿಯರ ನೇಮಕಾತಿ ಸಂಬಂಧ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಲಾಗಿದ್ದು, ಆಸಕ್ತರು ಆ. 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಣೆಗಾಗಿ ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅಥವಾ ದೂ: 08231-2420042 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.