

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿ0ದ 2025ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟಾçದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಕಲೆ, ಸಂಸ್ಕೃತಿ, ಪರಿಸರ ಸಂರಕ್ಷಣೆ, ಮತ್ತು ನೂತನ ಆವಿಷ್ಕಾರಗಳನ್ನು ಮಾಡಿದ 5ರಿಂದ 18 ವರ್ಷದೊಳಗಿನ ಜಿಲ್ಲೆಯ ಮಕ್ಕಳು ಜು. 31ರೊಳಗೆ ವೆಬ್‌ಸೈಟ್ https://awards.gov.in ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ National Awards portal ಗೆ ಭೇಟಿ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.