ಕಾವಾ ಬಿವಿಎ ದೃಶ್ಯಕಲೆಯಲ್ಲಿ ಪ್ರಥಮ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

art
Published on

ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) 2022-23ನೇ ಶೈಕ್ಷಣಿಕ ಸಾಲಿಗೆ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿವಿಎ) ದೃಶ್ಯಕಲೆಯಲ್ಲಿ ಪ್ರಥಮ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ಇದು ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯ ಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಪದವಿಯಾಗಿದ್ದು, ನಂತರ ಎರಡು ವರ್ಷದ ಸ್ನಾತಕೋತ್ತರ ಪದವಿ ಸಹ ಇರುತ್ತದೆ.

ಅರ್ಜಿ ಸಲ್ಲಿಸಲು ಸೆ.13 ಕಡೆಯ ದಿನ. ಆಸಕ್ತ ಅಭ್ಯರ್ಥಿಗಳು ಕಾವಾದ ವೆಬ್‌ಸೈಟ್ https://cavamysore.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ: 0821-2438931 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net