ಮಕ್ಕಳ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

pusta
Published on

ಮಂಗಳೂರು :ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2023ನೇ ಸಾಲಿನಲ್ಲಿ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ( ಪಠ್ಯದಾರಿತ ಬಿಟ್ಟು ) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ ) ಮಕ್ಕಳ ಸಾಹಿತ್ಯ ವಿಮರ್ಶ ಕೃತಿ ಈ ರೀತಿಯ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು, ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿಯ ಕೇಂದ್ರ ಕಚೇರಿಯ ವಿಳಾಸ: ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಖಮನಹಳ್ಳಿ, ಧಾರವಾಡ ಇಲ್ಲಿಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0836-2465490 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net