ಡೆಹರಾಡೂನ್ ಮಿಲಿಟರಿ ಶಾಲೆ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Army Day
Published on

ಮೈಸೂರು: ಉತ್ತರಾಖಂಡ್‌ನ ಡೆಹರಾಡೂನ್‌ನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಶಾಲೆಯಲ್ಲಿ ಎಂಟನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮುನ್ಸಿಪಾಲಿಟಿ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ದೃಢೀಕೃತ ಪ್ರತಿ, 5 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ) ಸಲ್ಲಿಸಬೇಕು.

ಶಾಲಾ ಪ್ರಾಚಾರ್ಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಢೀಕರಿಸಿದ ಅಭ್ಯರ್ಥಿಯ ಭಾವಚಿತ್ರದೊಂದಿಗೆ), ರಾಜ್ಯದ ವಾಸ ದೃಢೀಕರಣ ಪತ್ರ ಆಧಾರ್ ಕಾರ್ಡ್ ಪ್ರತಿ, ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತವಾಗಿ ರವಾನಿಸಲು 42 ರೂ.ಗಳ ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಹೊಂದಿರುವ ಲಕೋಟೆ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಬೆಂಗಳೂರಿನ ಸೈನಿಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಮಾಹಿತಿಗೆ ದೂ:080-25589459 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net