

ಮೈಸೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ 2024-25ನೇ ಸಾಲಿನ ಡಿಪ್ಲೊಮೋ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್, ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಕೋರ್ಸ್ ಗಳಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಪ್ರವೇಶಾತಿಯನ್ನು ಆನ್‌ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ” ಮೂಲಕ ನಡೆಸಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿಯನ್ನು ಮೇ.11 ರಿಂದ 27 ರವರೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 155267 ವೆಬ್‌ಸೈಟ್: https://gttc.karnataka.gov.in ಮತ್ತು http://cetonline.karnataka.gov.in ಅನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.