

ಮೈಸೂರು: ಸರ್ಕಾರಿ ಸಿ.ಪಿ.ಸಿ ಪಾಲಿಟೆಕ್ನಿಕ್‌ನಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ನಡಿ ನೇರವಾಗಿ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ 02 ವರ್ಷಗಳ ಐ.ಟಿ.ಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಂಶುಪಾಲರ ಹಂತದಲ್ಲಿ ಆಫ್ ಲೈನ್ ಮೂಲಕ ಪ್ರವೇಶವನ್ನು ನೀಡಲಾಗುವುದು. ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಿಂದ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಮೈಸೂರಿನ ಸರ್ಕಾರಿ ಸಿ.ಪಿ.ಸಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಿಗೆ ಜೂನ್ 25 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದ್ದು, ಇಲಾಖೆಯ ಅಧೀಕೃತ ವೆಬ್‌ಸೈಟ್ www.dtek.karnataka.gov.in ಅಥವಾ www.dtetech.karnataka.gov.in/kartechnical ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ಗ್ರೇಡ್-11 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.