ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸ್‌ಗೆ ಅರ್ಜಿ ಆಹ್ವಾನ

arji
Published on

ಕಾರ್ಕಳ: ಕಾರ್ಕಳದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೊಮಾ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಉತ್ತೀರ್ಣ, ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಕೋರ್ಸುಗಳು ಲಭ್ಯವಿದ್ದು, ಮೆರಿಟ್ ಆಧಾರಿತ ಮೊದಲು ಬಂದವರಿಗೆ ಆದ್ಯತೆ ನೆಲೆಯಲ್ಲಿ ಸೀಟು ಹಂಚಿಕೆ ಮಾಡಲಾಗುವುದು.

ಅತೀ ಕಡಿಮೆ ಸರ್ಕಾರಿ ಶುಲ್ಕ, ವಿದ್ಯಾರ್ಥಿವೇತನ ಸೌಲಭ್ಯ, ನುರಿತ, ಅನುಭವಿ ಬೋಧಕ ವೃಂದ, ಸುಸಜ್ಜಿತ ಕಟ್ಟಡಗಳ ಸಮುಚ್ಚಯ, ಪ್ರಯೋಗಾಲಯಗಳು, ಉತ್ತಮ ಕಲಿಕಾ ವಾತಾವರಣವಿದ್ದು ಡಿಪ್ಲೊಮಾ ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆಗಳಲ್ಲಿ ಜೆಇ/ಜೆಟಿಓ ಹುದ್ದೆಗಳು ಸೇರಿದಂತೆ ಅರೆ-ಸರ್ಕಾರಿ, ಖಾಸಗಿ ಉದ್ದಿಮೆಗಳಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲ ಕುಮಾರ ಕೆ.ಎಂ. ಮೊ.ನಂ:9731575859, ಪ್ರವೇಶ ನಿರ್ವಾಹಕ ಗುಣಪಾಲ ಜೈನ್ ಎಂ. 9901631044 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08258-298240 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net