ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Application
Published on

ಚನ್ನರಾಯಪಟ್ಟಣ: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹಾಸ್ಟೆಲ್ ಪೋರ್ಟಲ್ https://shp.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ತಾಲೂಕಿನ ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ಪೋರ್ಟಲ್ www.bcwd.karnataka.gov.in ನ್ನು ಪರಿಶೀಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಸಂಖ್ಯೆ-080-8050770004-8050770005, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ದೂರವಾಣಿ ಸಂಖ್ಯೆ 08176205803 ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net