ಡಾ.ಬಿ.ಆರ್.ಅಂಬೇಡ್ಕರ್ ಮಾಧ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

application
Published on

ಕಾಸರಗೋಡು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಕಲ್ಯಾಣ ಚಟುವಟಿಕೆಗಳ ಕುರಿತು ಅತ್ಯುತ್ತಮ ವರದಿಗಿರುವ ಡಾ.ಬಿ.ಆರ್ ಅಂಬೇಡ್ಕರ್ ಮಾಧ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುದ್ರಣ, ದೃಶ್ಯ, ಶ್ರಾವ್ಯ ಮಾಧ್ಯಮಗಳ ಉತ್ತಮ ವರದಿಗಳಿಗೆ ಈ ಪ್ರಶಸ್ತಿ ನೀಡಲಾಗುವುದು. ಆ.16, 2023ರಿಂದ ಆ.15, 2024ರವರೆಗಿನ ಅವಧಿಯ ವರದಿಗಳು ಮತ್ತು ಕಾರ್ಯಕ್ರಮಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುವುದು. ನ.14ರೊಳಗೆ ಅರ್ಜಿ ಸಲ್ಲಿಸಬೇಕು. ಮುಖ್ಯ ಪ್ರಚಾರಾಧಿಕಾರಿ, ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆ, ಅಯ್ಯಂಕಾಳಿ ಭವನ, ಕನಕ ನಗರ, ವೆಳ್ಳಯಂಬಲಂ, ಕವಡಿಯಾರ್ ಅಂಚೆ, ತಿರುವನಂತಪುರ-3 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಮಾಹಿತಿಗಾಗಿ <www.scdd.kerala.gov.in>ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 0471 2315375.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net