

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿ. 5ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.