ಶೈಕ್ಷಣಿಕ ಪ್ರೋತ್ಸಾಹಧನ ನೆರವಿಗೆ ಅರ್ಜಿ ಆಹ್ವಾನ

stipend
Published on

ಬೆಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ 2023-24ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿರುವವರಿಗೆ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಸೌಲಭ್ಯ ಸಿಗಲಿದೆ. ಅರ್ಜಿ ಸಲ್ಲಿಸಲು 2024ರ ಜ.31ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮಂಡಳಿಯ ವೆಬ್‌ಸೈಟ್‌ನಲ್ಲಿ ಡಿಡಿಡಿ.ಝ್ಝಡಿಚಿ.ಚ್ಟ್ಞಠಿ.ಜಟ.ಜ್ಞಿ ಅರ್ಜಿ ಸಲ್ಲಿಸಬಹುದಾಗಿದೆ. (ವಿದ್ಯಾರ್ಥಿಯು ಹಿಂದಿನ ಸಾಲಿನಲ್ಲಿ ಸಾಮಾನ್ಯ ವರ್ಗದಡಿ ಶೇ.50, ಎಸ್‌ಸಿ/ಎಸ್‌ಟಿ ಆದಲ್ಲಿ ಶೇ.45 ಅಂಕ ಪಡೆದಿರಬೇಕು). ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1 ಹಾಗೂ 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು 560022 - ಈ ವಿಳಾಸದಲ್ಲಿ ಖುದ್ದಾಗಿ ಅಥವಾ ದೂ: 080-23475188, 8277291175 ಮೂಲಕ ಸಂಪರ್ಕಿಸಬಹುದು ಎಂದು ಮಂಡಳಿಯ ಕಲ್ಯಾಣ ಆಯುಕ್ತರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net