ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

job new
Published on

ಮೈಸೂರು: ಸಿಪೆಟ್ 2024-25ನೇ ಸಾಲಿನ ಉದ್ಯೋಗಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ, ಕೋರ್ಸ್ಗಳ ಪ್ರವೇಶಕ್ಕೆ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅಥವಾ ಹಾಜರಾದವರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (DPT), ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (DPMT)  3 ವರ್ಷದ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆನ್‌ಲೈನ್ ನೋಂದಣಿಯು ಮಾ.26 ರಿಂದ ಪ್ರಾರಂಭವಾಗುತ್ತಿದ್ದು, ಆಸಕ್ತರು  www.cipet.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ: 0821-2510618, 9480253024, 9791431827, 9466585669 ಅನ್ನು ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net