ಉದ್ಯಮಶೀಲತಾ ತರಬೇತಿಗೆ ಅರ್ಜಿ ಅಹ್ವಾನ

application
Published on

ಮೈಸೂರು: 2023-24ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿಯ 50 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಸಂಸ್ಥೆಯಾದ ಐಐಎಂ-ಬೆಟಗಳೂರು ಸಂಸ್ಥೆಯ ಮೂಲಕ ಉದ್ಯಮಶೀಲತಾ ತರಬೇತಿಯನ್ನು ನೀಡಲು ಆನ್‌ಲೈನ್ ಮೂಲಕ ಜ.20 ರಿಂದ ಜ.31 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಮಹಿಳಾ ಪದವೀಧರರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಮೈಸೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net