ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಕಾಲೇಜು/ಸರ್ಕಾರಿ ಮುಸ್ಲಿಂ ವಸತಿ ಕಾಲೇಜು ಹಾಗೂ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಕಾಲೇಜಿನಲ್ಲಿ 2025&26ನೇ ಸಾಲಿನ ಶೈಣಿಕ ವರ್ಷದ ಪಿಸಿಎಂಬಿ/ಎಚ್ಇಬಿಎ ಗೂ ಪಿಸಿಎಂಬಿ/ಸಿಇಬಿಎ ವಿಷಯಗಳ ಪ್ರಥಮ ವರ್ಷದ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಹಾಗೂ ಇತರೆ ವರ್ಗದ ಶೇ. 25 ರಷ್ಟು ವಿದ್ಯಾರ್ಥಿಗಳಿಗೆ ನಿಯಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಅನುಸಾರ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಮೇ 17 ರಂದು ಕೊನೇ ದಿನ. ಆಸಕ್ತರು ಸೇವಾಸಿಂಧುhttps://sevasindhuservices.karnataka.gov.in/ ವೆಬ್ಸೆಟ್ ಮೂಲಕ ಅಥವಾ ಅಲ್ಪಸಂಖ್ಯಾತರ ಮುರಾರ್ಜಿ ದೇಸಾತಿ ವಸತಿ ಕಾಲೇಜು, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಕಾಲೇಜು ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ ದೂ: ಸಂಖ್ಯೆ. 08352&295523, ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ. 8970704986, ಇಂಡಿ ತಾಲೂಕು ಉಪ ವಿಭಾಗದ ವಿಸ್ತರಣಾಧಿಕಾರಿ ಮೊ. 9900229780, ಅರಕೇರಿಯ ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜು ಮೊ. 9591612073, ಸಿಂದಗಿಯ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮೊ. 9980952960, ವಿಜಯಪುರ ಅಫಜಲಪೂರ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ಮೊ. 9880103122, ಹಾಲಹಳ್ಳಿಯ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೊ. 9620828185ಕ್ಕೆ ಸಂಪರ್ಕಿಸಬಹುದು.
ಇಣಚಗಲ್ನ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೊ. 9844493306, ಮುದ್ದೇಬಿಹಾಳ&2 ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೊ. 7259179398, ಇಂಡಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಮೊ. 7892371709 ಹಾಗೂ ವಿಜಯಪುರ ನಂ&2 ನವಭಾಗದ ಮೌಲಾನಾ ಆಜಾದ್ ಮಾದರಿ ಶಾಲೆ ಮೊ. 9164777317ಕ್ಕೆ ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.