ಮಹಂತಿನ ಮಠದ ಸಂಸ್ಕೃತ ಪಾಠಶಾಲೆಯ ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

mahanthina mata
Published on

ಬೆಂಗಳೂರು: ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಆಶ್ರಯದಲ್ಲಿ ನಡೆಯುತ್ತಿರುವ ಬೆಂಗಳೂರಿನ ಚಿಕ್ಕಪೇಟೆಯ ಪ್ರಾಚೀನ ಮಹಂತಿನ ಮಠದ ಶ್ರೀಜಗದ್ಗುರು ರೇಣುಕಾದಿ ಪಂಚಾಚಾರ್ಯ ವೇದಾಗಮ, ಸಂಸ್ಕೃತ, ಜ್ಯೋತಿಷ್ಯ ಮತ್ತು ಸಂಗೀತ ಗುರುಕುಲದಲ್ಲಿ ಅಭ್ಯಾಸ ಮಾಡಲು ಬಯಸುವ ವೀರಶೈವ ಲಿಂಗಾಯಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ಅಥವಾ ಮೇಲ್ಪಟ್ಟ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮೇ.15ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಮೇ.19ರಂದು ಪೋಷಕರೊಂದಿಗೆ ಖುದ್ದು ಹಾಜರಾಗಿ ಮುಕ್ತ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯೆ, ಊಟ ಮತ್ತು ವಸತಿಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ: 9980971394 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net