ಸ್ವಂತ ಉದ್ಯಮವನ್ನು ಸ್ಥಾಪಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ

Application_new
Published on

ಮೈಸೂರು: ಕೌಶಲ್ಯಾಭಿವೃದ್ಧಿ ಉದ್ಯಮಶೀತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳಲ್ಲಿ ಹಮ್ಮಿಕೊಂಡಿದ್ದಾರೆ.

 ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಉತ್ತಿರ್ಣರಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ಸಯ್ಯಾಜಿರಾವ್ ರಸ್ತೆಯಲ್ಲಿನ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಯ್ಯಾಜಿರಾವ್ ರಸ್ತೆಯಲ್ಲಿನ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರ ಕಛೇರಿ ದೂ.ಸಂ 6361611136 /7353474649 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net