ಸಹಾಯಧನಕ್ಕೆ ಅರ್ಜಿ ಆಹ್ವಾನ

thotagarike elake images
Published on

ಮೊಳಕಾಲ್ಮೂರು: ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಡಿ ಸಹಾಯಧನಕ್ಕೆ ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಾಳಿಂಬೆ, ಡ್ರ್ಯಾಗನ್ ಫ್ರೂಟ್ಸ್, ಹೂವು, ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ, ಈರುಳ್ಳಿ ಶೇಖರಣಾ ಘಟಕ, ಪ್ಯಾಕ್‌ಹೌಸ್, ವೈಯಕ್ತಿಕ ಹಾಗೂ ಸಮುದಾಯ ಕೃಷಿಹೊಂಡ, ಸಮಗ್ರ ಕಾರ್ಯಕ್ರಮಗಳನ್ನಾದರಿಸಿ ಶೇ.25 ರಿಂದ 50ರಷ್ಟು ಸಹಾಯ ಧನದ ಸೌಲಭ್ಯ ಪಡೆಯಲು ಸಣ್ಣ ರೈತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಕೆ.ಎ.ಸುಧಾಕರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net