ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

14 DHARWAD (FREE HOSTEL)
????????????????????????????????????
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಶ್ರೀಗುರು ಶಿವಪ್ಪಯ್ಯ ಶಿವಯೋಗಿ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ನಡೆಸುತ್ತಿರುವ ವೀರಶೈವ ಸಂಸ್ಕೃತ ವೇದ ಪಾಠಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಜಿಲ್ಲೆಯ 5, 6 ಹಾಗೂ 7ನೇ ತರಗತಿ ಪಾಸಾದ ವೀರಶೈವ ಬಡ ಜಂಗಮ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಧರ್ಮದರ್ಶಿಗಳು, ಶ್ರೀಗುರು ಶಿವಪ್ಪಯ್ಯ ಶಿವಯೋಗಿ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್, ಉಗರಗೋಳ, ಸವದತ್ತಿ ತಾಲೂಕು, ಬೆಳಗಾವಿ ಜಿಲ್ಲೆ- 591110 ಈ ವಿಳಾಸಕ್ಕೆ ಮೇ 23ರೊಳಗೆ ಅರ್ಜಿ ಸಲ್ಲಿಸಬೇಕು. ಮೇ 25ರಂದು ಬೆಳಗ್ಗೆ 11 ಗಂಟೆಗೆ ಮಠದಲ್ಲಿ ಪ್ರವೇಶ ಪರೀಕ್ಷೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net