

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಮಾಜ ಕಲ್ಯಾಣ ಇಲಾಖೆಯಿಂದ 2024- 25ನೇ ಸಾಲಿಗಾಗಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ https:/ twd.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.