ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Application-1-1280x720
Published on

2023-24ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ 2022 ನೇ ವರ್ಷದಲ್ಲಿನ (01.01.2022 ರಿಂದ 31.12.2022) ಅಂತರರಾಷ್ಟ್ರೀಯ , ರಾಷ್ಟ್ರೀಯ  ಮತ್ತು ರಾಜ್ಯಮಟ್ಟದ ಅಧಿಕೃತ ಕ್ರಿಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ  ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಪಂಗಡದ ಕರ್ನಾಟಕ ಕ್ರೀಡಾಪಟುಗಳು ತಮ್ಮ ವಿವರಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿಮಾಡಿ ನಜರ್‌ಬಾದ್‌ನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 06 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರನ್ನು ಅಥವಾ ಕಛೇರಿಯ ದೂ.ಸಂ : 0821-2564179 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net