ಕನ್ನಡ ಕೃಷಿ ಪುಸ್ತಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Vijayavani-Featured-Image
Published on

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕನ್ನಡದಲ್ಲಿ ಕೃಷಿ ಬರವಣಿಗೆಯನ್ನು ಪ್ರೋತ್ಸಾಹಿಸಲು ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ ನೀಡುತ್ತಿದ್ದು 2023ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಕೃಷಿ ಸಂಬಂಧಿತ ಕನ್ನಡ ಪುಸ್ತಕಗಳನ್ನು ಲೇಖಕರಿಂದ ಆಹ್ವಾನಿಸಿದೆ.

ಪ್ರಶಸ್ತಿಯು 10,000 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಲೇಖಕರು ನಿಗದಿತ ನಮೂನೆಯಲ್ಲಿ ಪ್ರಶಸ್ತಿಗೆ ಸಲ್ಲಿಸುವ ಮೂರು ಪ್ರತಿಗಳನ್ನು ತಮ್ಮ ಸ್ವ ವಿವರಗಳೊಂದಿಗೆ ಜು.15ರೊಳಗೆ ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು 560065 ಇವರಿಗೆ ಕಳುಹಿಸುವುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080-23330153 ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net