ಕಾವಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Application-1-1280x720
Published on

ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜ್ಯುಯಲ್ ಆರ್ಟ್ಸ್ (ಎಂ.ವಿ.ಎ) [ಎರಡು ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಎ.ಸಿ ಪದ್ಧತಿ] ದೃಶ್ಯ ಕಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಮಾಸ್ಟರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನಾಂಕವಾಗಿರುತ್ತದೆ. ಸೆಪ್ಟೆಂಬರ್ 4 ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನವನ್ನು ಏರ್ಪಡಿಸಲಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು www.mysore.ni.in  ಅಥವಾ www.cavamysore.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂ: 0821-2438931 ಸಂಪರ್ಕಿಸಬಹುದು ಎಂದು ಕಾಲೇಜಿನ ಶೈಕ್ಷಣಿಕ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net