ಕಾಸರಗೋಡು: ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಮಹಿಳೆಯರನ್ನು ಗೌರವಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೀಡುವ ‘ವನಿತಾ ರತ್ನ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಸೇವೆ, ಕ್ರೀಡೆ, ಪ್ರತಿಕೂಲ ಸನ್ನಿವೇಶ ಎದುರಿಸಿ ಜೀವನದಲ್ಲಿ ಯಶಸ್ಸು ಸಾಧಿಸಿದ ಮಹಿಳೆಯರು, ಮಹಿಳಾ ಮತ್ತು ಮಕ್ಕಳ ಸಬಲೀಕರಣ, ಶಿಕ್ಷಣ-ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವೈಯಕ್ತಿಕ ಛಾಪು ಮೂಡಿಸಿದ ಮಹಿಳೆಯರು ಮತ್ತು ಕಲಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಪ್ರಶಸ್ತಿಗೆ ನಾಮನಿರ್ದೇಶನಗೊಂಡ ವ್ಯಕ್ತಿ ಜೀವಂತರಾಗಿದ್ದು, ಕನಿಷ್ಠ ಕಳೆದ ಐದು ವರ್ಷಗಳಿಂದ ಸಂಬಂಧಪಟ್ಟ ಕ್ಷೇತ್ರದಲ್ಲಿ ಕೆಲಸ ಮಾಡಿರಬೇಕು. ಅರ್ಜಿಗಳನ್ನು ಅಕ್ಟೋಬರ್ 10ರೊಳಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಗೆ ಕಳುಹಿಸಬೇಕು. ವ್ಯಕ್ತಿಗಳು, ಸಂಘಟನೆಗಳು ಮತ್ತು ಸಂಸ್ಥೆಗಳಿಗೆ ನಾಮನಿರ್ದೇಶನ ಮಾಡಬಹುದು. ಕಾಸರಗೋಡು ಸಿವಿಲ್ ಸ್ಟೇಶನ್‌ನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿ ಅಥವಾ *ಡ್ಚಿ.ಛ್ಟಿಚ್ಝ.ಜಟ.ಜ್ಞಿ ಸೈಟ್‌ನಿಂದ ಅರ್ಜಿ ನಮೂನೆ ಪಡೆಯಬಹುದು. ಮಾಹಿತಿಗೆ (04994293060) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.